25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನೇಕ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಆದುದರಿಂದ ಈಗ ಇರುವ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ, ಮೊದಲಾದ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಯವರಿಗೆ ಮನವಿಯನ್ನು ಸಲ್ಲಿಸಿದರು.

Related posts

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya
error: Content is protected !!