September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಬೆಳ್ತಂಗಡಿಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಯೂತ್ ತರಬೇತಿ ಕಾರ್ಯಕ್ರಮ ಜೂ.17 ರಂದು ನಡೆಯಿತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ) ಅಳದಂಗಡಿ ಇದರ ನಿರ್ದೇಶಕ ವಿಶ್ವನಾಥ್ ಹೊಳ್ಳ ಬಳಂಜ ಉದ್ಘಾಟಿಸಿ ಶುಭ ಹಾರೈಸಿದರು.

ವಲಯ ತರಬೇತುದರರು, ಘಟಕದ ಉಪಾಧ್ಯಕ್ಷರಾದ ಹೇಮಾವತಿ ಕೆ ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 35 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ವಹಿಸಿ, ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಲ್ಲಿ ತರಬೇತಿಯ ಮಹತ್ವವನ್ನು ವಿವರಿಸಿ ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಚಂದ್ರಪ್ಪ ಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯ ಪ್ರಯೋಜನದ ಬಗ್ಗೆ ವಿವರಿಸಿ, ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆಯಲ್ಲಿ ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್ ಉಪಸ್ಥಿತರಿದ್ದರು. ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷ ನಾರಾಯಣ ಶೆಟ್ಟಿ, ತರಬೇತಿದಾರರ ಪರಿಚಯವನ್ನು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್, ಜೆಸಿ ವಾಣಿಯನ್ನು ದೀಪ್ತಿ ಕುಲಾಲ್ ವಾಚಿಸಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷ ಶುಭಾಶ್ಚಂದ್ರ ಎಮ್ ಪಿ ಭಾಗವಹಿಸಿದರು. ಜೊತೆ ಕಾರ್ಯದರ್ಶಿಗಳಾದ ರಾಮಕೃಷ್ಣ ಧನ್ಯವಾದವಿತ್ತರು.

Related posts

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya
error: Content is protected !!