25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ,: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟ ನದಿಯಲ್ಲಿ ಸಾವಿರಾರು ಸಂಖ್ಯೆಯ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನಗೊಂಡಿರುವುದಲ್ಲದೆ ಪಕ್ಕದಲ್ಲಿ ಹರಿಯುತ್ತಿರುವ ನದಿಯ ಭಾಗಗಳಲ್ಲಿ ಕೂಡ ವಸ್ತ್ರಗಳು ತೇಲಿಕೊಂಡು ಬಂದು ಇಕ್ಕೆಲಗಳಲ್ಲಿ ಶೇಖರಣೆಗೊಂಡಿರುತ್ತದೆ. ಇದನ್ನು ಮನಗಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಸ್ವಚ್ಛತಾ ಕಾರ್ಯ ಜೂ16ರಂದು ನಡೆಸಿದರು.

ನದಿಯಲ್ಲಿ ಸ್ನಾನ ಮಾಡತಕ್ಕಂತಹ ತಳಭಾಗದಲ್ಲಿ ಬಿದ್ದಿದ್ದ ಸಾವಿರಾರು ಬಟ್ಟೆಗಳನ್ನ ಮೇಲಕ್ಕೆ ತಂದ ಸ್ವಯಂಸೇವಕರು ಟ್ರ್ಯಾಕ್ಟರ್ ನಲ್ಲಿ ಅದನ್ನು ತುಂಬಿಸಿ ಕೊಂಡೊಯ್ದರು. ಭಕ್ತಾದಿಗಳು ತೀರ್ಥ ಸ್ಥಾನ ಮಾಡಿದಂತಹ ಸಂದರ್ಭದಲ್ಲಿ ದೇವಳದ ವತಿಯಿಂದ ಪ್ರತಿವರ್ಧಕದ ಮೂಲಕ ಎಷ್ಟೇ ಎಚ್ಚರಿಕೆ ನೀಡಿದರು ಮತ್ತೆ ಅದೇ ಚಾಳಿಯನ್ನು ಸ್ಥಾನ ಮಾಡತಕ್ಕಂಥ ಭಕ್ತಾದಿಗಳು ಮಾಡುತ್ತಿರುವುದು ವಿಷಾದನೆಯಾಗಿದೆ.

ಈ ನಿಟ್ಟಿನಲ್ಲಿ ಶ್ರೀ ದೇವಳದ ವತಿಯಿಂದ ಕಠಿಣ ಕ್ರಮವನ್ನು ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ಸಾರ್ವಜನಿಕರು ತಿಳಿಯಪಡಿಸಿರುತ್ತಾರೆ. ಇಂದು ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರು ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲೀಜನ್ನ ಅಧ್ಯಕ್ಷರಾದ ಡಾ. ರವಿ ಕಕ್ಕೆಪದವು, ಸೀನಿಯರ್ ಚೇಂಬರ್ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ, ಸಮಾಜ ಸೇವಾ ಟ್ರಸ್ಟ್ ನ ಸದಸ್ಯರುಗಳು ಭಾಗವಹಿಸಿದ್ದರು.

Related posts

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!