22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

‌‌ಬೆಳ್ತಂಗಡಿ: ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವವನ್ನು ಗಳಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರಚನೆಗೊಂಡ ಬಿತ್ತಿ ಪತ್ರಿಕೆ ಅಕ್ಷರವಾಣಿಯನ್ನು ಅನಾವರಣಗೊಳಿಸಿ ಮಾತನಾಡುತ್ತಾ, ಪಠ್ಯ ಚಟುವಟಿಕೆಗಳನ್ನು ಕೇವಲ ಪಠ್ಯವಾಗಿ ಪರಿಗಣಿಸದೆ ಜೀವನ ಮೌಲ್ಯಗಳನ್ನು ರೂಪಿಸಿಕೊಳ್ಳುವಲ್ಲಿ ಬಳಸಿಕೊಳ್ಳಬೇಕು. ಪತ್ರಿಕೆ ಓದುವ ಹವ್ಯಾಸದಿಂದ ಹೆಚ್ಚಿನ ಜ್ಞಾನವನ್ನು ಪಡೆದು ಸೃಜನಶೀಲತೆಯನ್ನು ಗಳಿಸಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಉಪಸ್ಥಿತರಿದ್ದರು.
ಉಪನ್ಯಾಸಕಿ ರಮ್ಯಾ ಜೋಶಿ ಸ್ವಾಗತಿಸಿದರು. ಸೃಜನ್ ವಂದಿಸಿದರು. ಕುಮಾರಿ ಸಾಹಿತ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!