ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡ ಉನ್ನತಿ ಇದರ ಉದ್ಘಾಟನಾ ಸಮಾರಂಭವು ಜೂ.21 ರಂದು ಧರ್ಮಸ್ಥಳ ಕಲ್ಲೇರಿ ಸಂಘದ ವಠಾರ ನಡೆಯಲಿದೆ.

ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಲಿದ್ದಾರೆ.

ರೈತ ಸಭಾ ಭವನ ಹಾಗೂ ಊಟದ ಸಭಾಂಗಣ ಉದ್ಘಾಟನೆಯನ್ನು ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಅಧ್ಯಕ್ಷ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ. ವಹಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸಂಸದ ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್, ಕೆ. ಹರೀಶ್ ಕುಮಾರ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರು ರಮೇಶ್ ಎಚ್.ಎನ್., ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಶ್ರೀಮತಿ ತ್ರಿವೇಣಿ ರಾವ್, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಬಿ ವಿ ಪ್ರತೀಮಾ, ಧರ್ಮಸ್ಥಳ ಗ್ರಾಮ ಪಂಚಾಯತ್ಅಧ್ಯಕ್ಷೆ ಶ್ರೀಮತಿ ವಿಮಲ, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ ರಾವ್ ಭಾಗವಹಿಸಲಿದ್ದಾರೆ ಎಂದು ಧರ್ಮಸ್ಥಳ ಸಿ ಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎನ್. ಸತೀಶ್ ಹೊಳ್ಳ ತಿಳಿಸಿದ್ದಾರೆ,.

Related posts

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya
error: Content is protected !!