ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

ಮುಂಡಾಜೆ : ದೇವಾಂಗ ಸಮಾಜ ಅಭಿವೃದ್ಧಿಯೊಂದಿಗೆ ಪರಿಸರದ ಕಾಳಜಿ, ಇಲ್ಲಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಬಗ್ಗೆ ತಮ್ಮನ್ನು ತಾವು ಸಮರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕಾಗಿದೆ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಭಾಸ್ಕರ ಎಂ.ಡಿ ಹೇಳಿದರು.


ಇವರು ಚಂದ್ಕೂರಿನ ಮನೆಯಲ್ಲಿ ಇತ್ತೀಚೆಗೆ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಆಯೋಜನೆ, ವನಮಹೋತ್ಸವ, ದತ್ತಿನಿಧಿ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ, ಯಶಸ್ವಿಗೊಳಿಸುವುದೆಂದು ಸರ್ವಾನುಮತದಿಂದ ನಿರ್ಣಯಿಸಲಾಯಿತು. ಸಮಾಜಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಸಹಕರಿಸುತ್ತಿರುವ ವಿನೋದ್ , ಸಿಂಗಾಪುರ ಇವರನ್ನು ಸನ್ಮಾನಿಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ರಾಜ್ ಗೋಪಾಲ್, ಸೋಮಂತಡ್ಕ ವಹಿಸಿದ್ದರು. ವೇದಿಕೆಯಲ್ಲಿ ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು, ವಲಯ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು, ಘಟಕದ ಕಾರ್ಯದರ್ಶಿ ಮಹೇಂದ್ರ ಕೊಡಂಗೆ, ಕೋಶಾಧಿಕಾರಿ ಗಣೇಶ್ ದೇವಾಂಗ ಮೂಲಾರು ಉಪಸ್ಥಿತರಿದ್ದರು.


ಸೌಮ್ಮಪ್ರಭಾ ಮೂಲಾರು ಪ್ರಾರ್ಥಿಸಿದರು, ಮಂಜೇಶ್ ಕೊಡಂಗೆ ಸ್ವಾಗತಿಸಿ, ಶಶಿಧರ್ ವಂದಿಸಿದರು. ಸವಿತಾ ಕೇಶವ ದೇವಾಂಗ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya
error: Content is protected !!