23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ಖುಷಿ. ಹೆಚ್, ಮೈಸೂರು ಆಯ್ಕೆಯಾಗಿದ್ದಾರೆ. ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ.

ಜೂ.21 ರಂದು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ, ಅಮೃತ ವರ್ಷಿಣಿ ಸಭಾ ಭವನದಲ್ಲಿ ನಡೆಯುವ ಸಂದರ್ಭದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಪುರಸ್ಕಾರ ನಡೆಯಲಿದೆ.

ಪುರಸ್ಕಾರದ ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ನಡೆಸುತ್ತಾ ಬಂದಿದೆ. ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪ್ರ ಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!