37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

ಬೆಳ್ತಂಗಡಿ: ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಜೂ.16ರಂದು ಸಾರ್ವಜನಿಕ ಸ್ಥಳದಲ್ಲಿ, ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚಂದ್ರಶೇಖರ್ ಎ.ಎಮ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ವೇಳೆ ಜುಗಾರಿ ಆಟದಲ್ಲಿ ತೊಡಗಿದ್ದವರು ಪರಾರಿಯಾಗಲು ಯತ್ನಿಸಿದ್ದು, ಅವರುಗಳನ್ನು ತಡೆದು ಸ್ಥಳವನ್ನು ಪರಿಶೀಲಿಸಿದಾಗ, ಇಸ್ಪೀಟು ಎಲೆಗಳು, ನಗದು ರೂ. 11,730 ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು, ಬೆಳ್ತಂಗಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related posts

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!