April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರ್ಕಾರಿ ಪ್ರೌಢ ಶಾಲೆ ನಿಡ್ಲೆ, ಬೆಳ್ತಂಗಡಿ ತಾಲೂಕು ಇಲ್ಲಿ 2024-25ನೇ ಸಾಲಿನ ಯಕ್ಷನಾಟ್ಯ ತರಬೇತಿ ಜೂ.18ರಂದು ಉದ್ಘಾಟನೆಗೊಂಡಿತು.

ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ನಿಡ್ಲೆಯು ಯಕ್ಷಗಾನ ಕಲಾವಿದರ ಮತ್ತು ಕಲಾಸಕ್ತರ ಊರು ಇದನ್ನು ಮುಂದುವರಿಸಿಕೊಂಡು ಹೋಗಲು ವಿದ್ಯಾರ್ಥಿಗಳಿಗೆ ಸದಾವಕಾಶ ಎಂದು ಹೇಳುತ್ತಾ ಶುಭ ಕೋರಿದರು.


ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಇದರ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಫೌಂಡೇಶನ್ ಮಾಡುತ್ತಿರುವ ಕಲಾ ಸೇವೆಯ ಮತ್ತು ಕಲಾ ಪೋಷಕ ಕೈಂಕರ್ಯಗಳ ಕುರಿತಾದ ಸಂಕ್ಷಿಪ್ತ ಮಾಹಿತಿಯನ್ನು ನೀಡಿ ಶುಭ ಹಾರೈಸಿದರು.

ಯಕ್ಷಗಾನ ಗುರುಗಳಾದ ಈಶ್ವರ ಪ್ರಸಾದ್ ಯಕ್ಷಗಾನವು ಉತ್ತಮ ಕಲೆಯಾಗಿದ್ದು ಶಿಕ್ಷಣದ ಜೊತೆ ಇಂತಹ ಕಲೆಯನ್ನು ಅಭ್ಯಾಸ ಮಾಡಿದರೆ ಒಳ್ಳೆಯದು ಎಂದು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಮುಖ್ಯ ಶಿಕ್ಷಕರಾದ ಶಾಂತ ಶೆಟ್ಟಿ ಎರಡು ವರ್ಷಗಳಿಂದ ಪಟ್ಲ ಫೌಂಡೇಶನ್ ನ ಸಹಕಾರ ಸಿಗುತ್ತಿರುವುದು ಬಹಳ ಖುಷಿಯ ವಿಚಾರ ಎಂದು ತಿಳಿಸುತ್ತಾ ಸಿಕ್ಕಿದ ಸೌಭಾಗ್ಯವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಳೆದ ವರ್ಷ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದ ಪಟ್ಲ ಭಾಗವತರನ್ನು ನೆನಪಿಸಿಕೊಂಡು ಧನ್ಯವಾದಗಳನ್ನು ಸಲ್ಲಿಸಿದರು.


ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಪುರುಷೋತ್ತಮ ಗೌಡರು ಅಧ್ಯಕ್ಷತೆ ವಹಿಸಿ ಶುಭ ಕೋರಿದರು.

ಟ್ರಸ್ಟ್ ನ ಬೆಳ್ತಂಗಡಿ ಘಟಕದ ಸಂಚಾಲಕ ಕಿರಣ್ ಶೆಟ್ಟಿ, ಕಾಯರ್ತಡ್ಕ ಪ್ರೌಢಶಾಲೆಯ ಶಿಕ್ಷಕ ವಿನಾಯಕ ಜೋಶಿ, ಛಾಯಾಗ್ರಾಹಕರಾದ ಗಂಗಾಧರ್, ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಯಕ್ಷಗಾನ ಶೈಲಿಯಲ್ಲಿ ಶರತ್ ಕುಮಾರ್ ಪ್ರಾರ್ಥಿಸಿದರು. ಉಷಾ ಸ್ವಾಗತಿಸಿ, ಸೌಮ್ಯ ವಂದಿಸಿದರು. ಕಾರ್ಯಕ್ರಮವನ್ನು ಶೋಲಿ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ನಂತರ ಯಕ್ಷಗಾನ ಗುರುಗಳು ವಿದ್ಯಾರ್ಥಿಗಳಿಗೆ ಪ್ರಾರಂಭಿಕ ನಾಟ್ಯ ತರಬೇತಿಯನ್ನು ಆರಂಭಿಸಿದರು.

Related posts

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya
error: Content is protected !!