31.1 C
ಪುತ್ತೂರು, ಬೆಳ್ತಂಗಡಿ
November 24, 2024
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

ಉಜಿರೆ : “ನಾಯಕನಾದವನು ಸ್ವತಃ ತಾನು ನೀತಿ ನಿಯಮಗಳನ್ನು ಪಾಲಿಸಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಮ್ಮ ಅಭಿರುಚಿಯನ್ನು ತಿಳಿದು, ಆ ಕ್ಷೇತ್ರವನ್ನು ಆರಿಸಿಕೊಳ್ಳಿ” ಎಂದು ಅಡ್ವೋಕೇಟ್ ಬಾರ್ ಕೌನ್ಸಿಲ್ ಬೆಳ್ತಂಗಡಿಯ ಕಾನೂನು ಸಲಹೆಗಾರರಾದ ಧನಂಜಯ್ ರಾವ್ ಹೇಳಿದರು.

ಇವರು ಶ್ರೀ.ಧಂ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆ ಇಲ್ಲಿ ಜೂ19 ರಂದು ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಮತ್ತು ಹಳೆ ವಿದ್ಯಾರ್ಥಿ ಹಾಗೂ ಶಾಲಾ ನಾಯಕನಾಗಿದ್ದ ಸಾತ್ವಿಕ್ ರಾವ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಾಥ್ವಿಕ ಮತ್ತು ಜ್ಞಾನ್ದೀಪ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿ ವರ್ಷ ವಂದಿಸಿದರು.

Related posts

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!