23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

ಕೊಯ್ಯೂರು : ಇಲ್ಲಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಆನಂದ ಡಿ. ಯವರು, ದೀಪ ಪ್ರಜ್ವಲನದೊoದಿಗೆ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ತಮ್ಮ ಬದ್ಧತೆಯ ಬಗ್ಗೆ ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮೋಹನ ಗೌಡ ವಹಿಸಿಕೊಂಡಿದ್ದರು.

ಕಾರ್ಯಕ್ರಮ ಸಂಘಟಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.


ವಿದ್ಯಾರ್ಥಿಗಳಾದ ಭವ್ಯ, ಪ್ರಜ್ಞಾ, ನಿಶ್ಮಿತಾ ಪ್ರಾರ್ಥನೆ ಗೈದರು. ಕುಮಾರಿ ಭವ್ಯ ಸ್ವಾಗತಿಸಿ, ವಿದ್ಯಾರ್ಥಿ ನಾಯಕ ಕೃತಿಕ್ ವಂದಿಸಿದರು. ಕು| ರಂಝಿನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶ್ರೀಮತಿ ಭವ್ಯ, ಲಕ್ಷ್ಮಣ ಗೌಡ, ಶ್ರೀಮತಿ ಪ್ರೀತಿ, ಸಂತೋಷ್ ಸಹಕರಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya
error: Content is protected !!