26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಯಕ್ಷ ಶಿಕ್ಷಣ ಯೋಜನೆಯ ಅಡಿಯಲ್ಲಿ ಸರ್ಕಾರಿ ಪ್ರೌಢ ಶಾಲೆ ನಿಡ್ಲೆ, ಬೆಳ್ತಂಗಡಿ ತಾಲೂಕು ಇಲ್ಲಿ 2024-25ನೇ ಸಾಲಿನ ಯಕ್ಷನಾಟ್ಯ ತರಬೇತಿ ಜೂ.18ರಂದು ಉದ್ಘಾಟನೆಗೊಂಡಿತು.

ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ನಿಡ್ಲೆಯು ಯಕ್ಷಗಾನ ಕಲಾವಿದರ ಮತ್ತು ಕಲಾಸಕ್ತರ ಊರು ಇದನ್ನು ಮುಂದುವರಿಸಿಕೊಂಡು ಹೋಗಲು ವಿದ್ಯಾರ್ಥಿಗಳಿಗೆ ಸದಾವಕಾಶ ಎಂದು ಹೇಳುತ್ತಾ ಶುಭ ಕೋರಿದರು.


ಯಕ್ಷ ಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಇದರ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಫೌಂಡೇಶನ್ ಮಾಡುತ್ತಿರುವ ಕಲಾ ಸೇವೆಯ ಮತ್ತು ಕಲಾ ಪೋಷಕ ಕೈಂಕರ್ಯಗಳ ಕುರಿತಾದ ಸಂಕ್ಷಿಪ್ತ ಮಾಹಿತಿಯನ್ನು ನೀಡಿ ಶುಭ ಹಾರೈಸಿದರು.

ಯಕ್ಷಗಾನ ಗುರುಗಳಾದ ಈಶ್ವರ ಪ್ರಸಾದ್ ಯಕ್ಷಗಾನವು ಉತ್ತಮ ಕಲೆಯಾಗಿದ್ದು ಶಿಕ್ಷಣದ ಜೊತೆ ಇಂತಹ ಕಲೆಯನ್ನು ಅಭ್ಯಾಸ ಮಾಡಿದರೆ ಒಳ್ಳೆಯದು ಎಂದು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಮುಖ್ಯ ಶಿಕ್ಷಕರಾದ ಶಾಂತ ಶೆಟ್ಟಿ ಎರಡು ವರ್ಷಗಳಿಂದ ಪಟ್ಲ ಫೌಂಡೇಶನ್ ನ ಸಹಕಾರ ಸಿಗುತ್ತಿರುವುದು ಬಹಳ ಖುಷಿಯ ವಿಚಾರ ಎಂದು ತಿಳಿಸುತ್ತಾ ಸಿಕ್ಕಿದ ಸೌಭಾಗ್ಯವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಳೆದ ವರ್ಷ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದ ಪಟ್ಲ ಭಾಗವತರನ್ನು ನೆನಪಿಸಿಕೊಂಡು ಧನ್ಯವಾದಗಳನ್ನು ಸಲ್ಲಿಸಿದರು.


ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಪುರುಷೋತ್ತಮ ಗೌಡರು ಅಧ್ಯಕ್ಷತೆ ವಹಿಸಿ ಶುಭ ಕೋರಿದರು.

ಟ್ರಸ್ಟ್ ನ ಬೆಳ್ತಂಗಡಿ ಘಟಕದ ಸಂಚಾಲಕ ಕಿರಣ್ ಶೆಟ್ಟಿ, ಕಾಯರ್ತಡ್ಕ ಪ್ರೌಢಶಾಲೆಯ ಶಿಕ್ಷಕ ವಿನಾಯಕ ಜೋಶಿ, ಛಾಯಾಗ್ರಾಹಕರಾದ ಗಂಗಾಧರ್, ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಯಕ್ಷಗಾನ ಶೈಲಿಯಲ್ಲಿ ಶರತ್ ಕುಮಾರ್ ಪ್ರಾರ್ಥಿಸಿದರು. ಉಷಾ ಸ್ವಾಗತಿಸಿ, ಸೌಮ್ಯ ವಂದಿಸಿದರು. ಕಾರ್ಯಕ್ರಮವನ್ನು ಶೋಲಿ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ನಂತರ ಯಕ್ಷಗಾನ ಗುರುಗಳು ವಿದ್ಯಾರ್ಥಿಗಳಿಗೆ ಪ್ರಾರಂಭಿಕ ನಾಟ್ಯ ತರಬೇತಿಯನ್ನು ಆರಂಭಿಸಿದರು.

Related posts

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya
error: Content is protected !!