25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

ಮಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದೀ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದರೆ ಸೆಲೆಬ್ರೆಟಿಗಳು, ಗಣ್ಯವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

ಅಷ್ಟೇ ಅಲ್ಲದೇ ಶಾಲಾ ಸಂಸ್ಥೆಯಲ್ಲಿ ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಆಚರಿಸುವುದರಿಂದ ಕೆಲವು ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಎಂದು ಬೇಜಾರಾಗುತ್ತದೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Related posts

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya
error: Content is protected !!