April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜು. 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಶೀಘ್ರ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

ಇತ್ಯರ್ಥ ಪಡಿಸಿಕೊಳ್ಳಬಹುದಾದ ಪ್ರಕರಣ: ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಛೇದನ ಪ್ರಕರಣ ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್, ನೀರಿನ ಶುಲ್ಕಕ್ಕೆ ಸಂಬಂಧ ಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿತ, ಕಾನೂನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಬಹುದು ಎಂದು ತಿಳಿಸಲಾಗಿದೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya
error: Content is protected !!