March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ಜೂ 19 ರಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ಇವರು ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಳಿಕ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಸದಸ್ಯರಾಗಿ, ಉಪಾಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ ಅವರು 2013 ರಿಂದ 2018 ರ ತನಕ ಕರ್ನಾಟಕ ರಾಜ್ಯ ಸರ್ಕಾರದ ಗೇರು ಅಭಿವೃದ್ಧಿ ನಿಗಮದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಅವರ ಹುಟ್ಟೂರು ಲಾಯಿಲದಲ್ಲಿ ನಡೆಯಲಿದ್ದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪಡ್ಲಾಡಿ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಂಬ ಮಾಹಿತಿ ತಿಳಿದು ಬಂದಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!