March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ಜೂ 19 ರಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ಇವರು ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಳಿಕ ಬೆಳ್ತಂಗಡಿ ತಾಲೂಕು ಪಂಚಾಯತ್ ನ ಸದಸ್ಯರಾಗಿ, ಉಪಾಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ ಅವರು 2013 ರಿಂದ 2018 ರ ತನಕ ಕರ್ನಾಟಕ ರಾಜ್ಯ ಸರ್ಕಾರದ ಗೇರು ಅಭಿವೃದ್ಧಿ ನಿಗಮದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಅವರ ಹುಟ್ಟೂರು ಲಾಯಿಲದಲ್ಲಿ ನಡೆಯಲಿದ್ದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪಡ್ಲಾಡಿ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಂಬ ಮಾಹಿತಿ ತಿಳಿದು ಬಂದಿದೆ.

Related posts

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya
error: Content is protected !!