29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಪ್ರಣವ್ ಪಿ ಪಿ, ಅಸೋಸಿಯೇಟ್ ಪ್ರೊಫೆಸರ್, ಎಸ್.ಡಿ.ಎಂ. ಪ್ರಕೃತಿ ಮತ್ತು ಯೋಗ ಚಿಕಿತ್ಸಾ ಕಾಲೇಜು, ಉಜಿರೆ ಇವರು ಮಾತನಾಡಿ ? ಯೋಗವು ಮಾನವನ ಮಾನಸಿಕ, ದೈಹಿಕ, ನೈತಿಕ, ಆಧ್ಯಾತ್ಮಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಯೋಗವು ಆತ್ಮ ಸಂತೃಪ್ತಿ ಹಾಗೂ ಸಂತೋಷವನ್ನು ಹೆಚ್ಚಿಸುತ್ತದೆ. ಯೋಗವು ಮಗುವಿನ ಬೆಳವಣಿಗೆಗೆ ಹಾಗೂ ಮಾನಸಿಕ ಖಿನ್ನತೆಯಿಂದ ಹೊರಬರಲು ಸಹಕರಿಸುತ್ತದೆ ಎಂದು ಹೇಳಿದರು.


ಯೋಗವು ಎಲ್ಲಾ ರೀತಿಯ ಕಾಯಿಲೆಗಳಿಗೆ, ಉಸಿರಾಟ ಪ್ರಕ್ರಿಯೆಗೆ, ದೈಹಿಕ ಸಮತೋಲನ ಹಾಗೂ ಮಾನಸಿಕ ಉದ್ವೇಗ ನಿಯಂತ್ರಣಕ್ಕೆ ಬಹುಮುಖ್ಯವಾಗಿದೆ. ಯೋಗವು ಏಕಾಗ್ರತೆಯನ್ನು ವೃದ್ಧಿಸಲು, ಒತ್ತಡದಿಂದ ಹೊರಬರಲು, ಧ್ವನಿ ವೃದ್ಧಿಸಲು ಶಿಕ್ಷಕರಿಗೆ ಸಹಕರಿಸುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಯೋಗವನ್ನು ಕಲಿಸಬೇಕು. ಪಠ್ಯಕ್ರಮದಲ್ಲಿ ಯೋಗವು ಸೇರಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ್ಹ ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಅನುಷಾ ಡಿ ಜೆ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸ್ವಾತಿ ಸ್ವಾಗತಿಸಿ, ಮಲ್ಲಿಕಾರ್ಜುನ ವಂದಿಸಿ, ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!