September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಭ್ರಾಮರಿ ಭಜನಾ ಮಂಡಳಿ ಗುರುವಾಯನಕೆರೆ ಇಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆಯ ಕಾರ್ಯಕ್ರಮವು ಇಲ್ಲಿಯ ನಮ್ಮ‌ ಮನೆ ಹವ್ಯಕ ಭವನದಲ್ಲಿ ಕುಣಿತ ಭಜನಾ ತರಬೇತಿ ಪಡೆಯಲಿಚ್ಚಿಸುವ ಮಕ್ಕಳ ಪೋಷಕರ ಪಾಲ್ಗೊಳ್ಳುವಿಕೆಯೊಂದಿಗೆ ನಡೆಯಿತು.


ಸಭೆಯ ಉದ್ಘ್ಹಾಟನೆಯನ್ನು ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಉದ್ಘಾಟಿಸಿ ನಾವು ಕಲಿಸುತ್ತಿರುವ ಹಾಗೂ ಕಲಿಯುತ್ತಿರುವ ಭಜನೆಯು ನಮ್ಮ ಧಾರ್ಮಿಕ ಪರಂಪರೆಗೆ ಚ್ಯುತಿ ಬಾರದಂತೆ ಶ್ರದ್ಧಾ ಭಕ್ತಿಯಿಂದ ನಡೆಯುವಂತಾಗಲೆಂದು ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತ ಭಜನೆಯಲ್ಲಿ ಮಕ್ಕಳ ಪಾಲ್ಗೊಳ್ವಿಕೆಯ ಮಹತ್ವದ ಬಗ್ಗೆ ಪೋಷಕರಿಗೆ ಮಾರ್ಗದರ್ಶನ ಮಾಡಿದರು.


ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಕುಣಿತ ಭಜನೆಯ ತರಬೇತುದಾರರು ಭಜನೆಯಿಂದ ವಿಭಜನೆ ಇಲ್ಲ ಎನ್ನುವುದರ ಬಗ್ಗೆ ಸವಿಸ್ತಾರವಾದ ಮಾಹಿತಿಗಳನ್ನು ನೀಡಿದರು.
ಈ‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭ್ರಾಮರಿ ಭಜನಾ ಮಂಡಳಿಯ ಅಧ್ಯಕ್ಷ ರಮೇಶ್ ಬಂಗೇರ ಓಟ್ಲರವರು ವಹಿಸಿದ್ದರು.


ಭಜನಾ ತರಬೇತುದಾರರು ಹಾಗೂ ತಾಲೂಕು ಕುಣಿತ ಭಜನೆಯ ತರಬೇತಿದಾರರ ಸಂಘದ ನೂತನ ಅಧ್ಯಕ್ಷ ಸಂದೇಶ್‌ ಮದ್ದಡ್ಕ ಹಾಗೂ ಭಜನಾ ಮಂಡಳಿಯ ಕಾರ್ಯದರ್ಶಿಯವರಾದ ಸುಮಿತ್ರಾ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಾರಂಭದಲ್ಲಿ ಕು| ರಕ್ಷಾ ಸ್ವಾಗತಿಸಿ, ಕು| ವೀಕ್ಷಿತಾ ವಂದಿಸಿದರು. ಕಾರ್ಯಕ್ರಮದಲ್ಲಿ ಕುಣಿತ ಭಜನೆ ತರಬೇತಿ ಪಡೆಯುವ ವಿಧ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!