July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.


ಮೂಲತ: ನೇಪಾಳಿಯಾಗಿದ್ದು ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ವಾಸವಾಗಿದ್ದ ಚಕ್ರ ಬಹದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ(44ವ.) ಮೃತಪಟ್ಟವರು. ಇವರು ಜೂ.11ರಂದು ಸಂಜೆ ಅಡುಗೆ ಮಾಡುವ ಸಲುವಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ತರದ ಸುಟ್ಟಗಾಯ ಉಂಟಾಗಿತ್ತು. ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೂ.18ರಂದು ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಚಕ್ರ ಬಹದ್ದೂರು ಅವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!