25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳ, ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು, ಶ್ರೀಮಾತಾ ನಾಲ್ಕೂರು, ಜ್ಯೋತಿ ಯುವತಿ ಮಂಡಲ ಬಳಂಜ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 15ರಿಂದ ಪ್ರಾರಂಭಗೊಂಡು 21ರ ವರೆಗೆ ಉಚಿತ ಯೋಗ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಬಳಂಜದಲ್ಲಿ ನಡೆಯಿತು.

ಕಳೆದೊಂದು ವಾರದಿಂದ ಯೋಗ ತರಭೇತಿಯನ್ನು ನೀಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳದ ಡಾ.ಅಭಿಷೇಕ್ ಮತ್ತು ಸುಶ್ಮಿತಾ ಶೆಟ್ಟಿಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,
ಅಳದಂಗಡಿ ಪ್ರಾ.ಕೃ.ಪ.ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಸಂಘದ ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ,ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಸದಾನಂದ ಸಾಲಿಯಾನ್ ಬಳಂಜ, ಸತೀಶ್ ಕೆ ಬರಮೇಲು, ಸಂಘದ ನಿರ್ದೇಶಕ ರಂಜಿತ್ ಪೂಜಾರಿ,ಕಾರ್ಯದರ್ಶಿ ಜಗದೀಶ್ ಪೂಜಾರಿ,ಸೀತರಾಮ ಪೂಜಾರಿ ಮಜಲೋಡಿ, ಅನಸೂಯ, ನಾರಾಯಣ ಪೂಜಾರಿ, ಗೀರೀಶ್ ನಿಟ್ಟಡ್ಕ,ವಿಜಯ ಪೂಜಾರಿ, ಅನಿತಾ ಹೆಗ್ಡೆ,ಪುಷ್ಪಾವತಿ, ದಿನೇಶ್ ನಿಟ್ಟಡ್ಕ,ಅಚ್ಚುತ್ತಾ ಪೂಜಾರಿ, ವಿನಯ್ ಶೆಟ್ಟಿ, ಗಣೇಶ್ ದೇವಾಡಿಗ, ನಿತ್ಯಾನಂದ ಹೆಗ್ಡೆ, ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿ, ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

Related posts

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya
error: Content is protected !!