32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಶಾಲಾ ಸಭಾಭವನದಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ವಿದ್ಯಾರ್ಥಿಯಾದ ಮಹಮ್ಮದ್ ಫಾಹೀಝ್ ರವರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಣೆ ನೀಡಿದರು.

ಕಾರ್ಯಕ್ರಮಕ್ಕೆ ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ನಿರ್ದೇಶಕ ಪ್ರಕಾಶ್ ಡಿಸೋಜ ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಯೋಗವು ನಮ್ಮ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಬೆಳೆಸಲು ಯೋಗವು ಸಹಾಯ ಮಾಡುತ್ತದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ ರವರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅನೆಟ್ ಅಣ್ಣ ಚಾರ್ಲಿರವರು ನೀರೂಪಿಸಿ, ರಿವಾನಿಯಾ ಶಾನ್ವಿ ರವರು ಸ್ವಾಗತಿಸಿ, ಅಭಿಗೆಲ್ ರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya
error: Content is protected !!