24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಯೋಗ ದಿನಾಚರಣೆ ಜರಗಿತು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜ ಎಸ್ ಗೌಡರವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿ, ಶುಭಹಾರೃಸಿ ಮಾತನಾಡುತ್ತಾ, ಯೋಗ ನಮ್ಮ ದೇಶದ ಮೌಲ್ಯ ಸಂಪತ್ತು. ಇಂತಹ ಯೋಗ ಸಂಪತ್ತಿನ ಮೂಲಕ ನಾವು ವೈಯಕ್ತಿಕ ಮತ್ತು ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ವೇದಿಕೆಯಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮದ ಮಾರ್ಗದರ್ಶಕರಾದ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಸ್ವಾಗತಿಸಿ, ವಿದ್ಯಾರ್ಥಿಗಳಾದ ಹೇಮಲತಾ ವಂದಿಸಿದರು, ತೃಷಾ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!