ಬೆಳ್ತಂಗಡಿ : ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳ ಜಂಟಿ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ರೋವರ್ ಸ್ಕೌಟ್ ಲೀಡರ್ ಹಾಗೂ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ರವಿ ಎಂ ಏನ್ ಇವರು ಯೋಗದ ವಿವಿಧ ಪ್ರಕಾರಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ ಎನ್ ಯೋಗದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾದ ಪ್ರೊಫೆಸರ್ ರೊನಾಲ್ಡ್ ಪ್ರವೀಣ್ ಕೊರಾಯ ಇವರು ಸ್ವಾಗತಿಸಿ ಪ್ರಸ್ತಾವನೆ ನುಡಿಗೈದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ. ಸುಬ್ರಹ್ಮಣ್ಯ ಕೆ, ದೈಹಿಕ ಶಿಕ್ಷಣ ನಿರ್ದೇಶಕರಾದ ಕುಮಾರಿ ದೀಪ, ಪ್ರಾಧ್ಯಾಪಕರಾದ ಪ್ರೊಫೆಸರ್ ನವೀನ್ ಹಾಗೂ ಗ್ರಂಥಪಾಲಕರಾದ ಜಗದೀಶ್ ಎಸ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಂತಿಮ ಬಿಬಿಎ ವಿದ್ಯಾರ್ಥಿನಿಯರಾದ ಕುಮಾರಿ ಲಕ್ಷ್ಮಿ, ಕುಮಾರಿ ಚೈತ್ರ ಹಾಗೂ ಅಂತಿಮ ಎಂಕಾಂ ನ ಕುಮಾರಿ ಶರಣ್ಯ ಇವರು ಯೋಗ ಪ್ರಾತ್ಯಕ್ಷಿಕೆ ಮಾಡಿ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿದರು. ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಡಾ. ರವಿ ಎಂ ಎನ್ ವಂದನಾರ್ಪಣೆ ಮಾಡಿದರು.