ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೨೧ರಂದು ಯೋಗ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಯೋಗವು ಮಾನಸಿಕ ಮತ್ತು ಶಾರೀರಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಮುಖ್ಯ ಅತಿಥಿಗಳಾಗಿ ವಾಣಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಯೋಗ ತರಬೇತಿಯನ್ನು ನೀಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ ಕಾಲೇಜಿನ ವಿದ್ಯಾರ್ಥಿನಿ ಯಕ್ಷ ಜೈನ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಯೋಗದ ಪ್ರಾತ್ಯಕ್ಷಿಕೆಯನ್ನು ನೆರೆವೇರಿಸಿದರು.
ವಿದ್ಯಾರ್ಥಿಗಳಾದ ಮಾನ್ಯ, ಧೃತಿ, ಮನಿಷಾ, ಅದ್ವಿತಾ ಪ್ರಾರ್ಥನೆಗೈದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಮೋಹನಾಂಗಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಸುಮಲತಾ ಎ. ವಂದಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಶಾಂತಿ ಪಾಸ್ ಕಾರ್ಯಕ್ರಮ ನಿರೂಪಿಸಿದರು.