26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಸಂಸ್ಥೆ, ಮೂಡಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮೂಡಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸ್ಕೌಟ್ಸ್ ವಿದ್ಯಾರ್ಥಿ ಸುಚೇತ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳಾದ ನವಮಿ, ಅಭಿಜ್ಞಾ ಎಸ್. ಶೆಟ್ಟಿ, ತೃಪ್ತಿ ಮತ್ತು ಸಂಜನಾ ಪೈ ಭಾಗವಹಿಸಿ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ರಾಜ್ಯಮಟ್ಟದ ಪುರಸ್ಕಾರ ಪಡೆದ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಅಭಿನಂದಿಸಿದರು.

Related posts

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya
error: Content is protected !!