ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಉಜಿರೆ ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯಕುಮಾರ್. ಎಂ ಇವರು ಪೋಷಕರನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಪಾತ್ರ ಹಾಗೂ ಶಿಕ್ಷಕರ ಪಾತ್ರವನ್ನು ವಿವರಿಸುತ್ತಾ, ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆಗೊಳಿಸಿ ನೈತಿಕ ಮೌಲ್ಯಗಳನ್ನು ಹೆಚ್ಚಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾದದ್ದು ಎಂದು ವಿವರಿಸಿದರು.
ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್ ಮಾತನಾಡಿ ಪ್ರಸ್ತುತ ಶೈಕ್ಷಣಿಕ ರೀತಿ ನೀತಿಗಳು ಹಾಗೂ ಶಾಲೆಯಲ್ಲಿ ನಡೆಯುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ವಿವರಿಸಿ, ಪೋಷಕರ ಅಹವಾಲುಗಳನ್ನು ವಿಮರ್ಶಿಸಿದರು.
ಶಿಕ್ಷಕಿಯಾದ ಶ್ರೀಮತಿ ಶಶಿಪ್ರಭ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಧನ್ಯವತಿ ಅತಿಥಿ ಪರಿಚಯ ಮಾಡಿದರು. ಶಿಕ್ಷಕರಾದ ಹರೀಶ್ ಭಟ್ ಸ್ವಾಗತಿಸಿ, ರಾಘವೇಂದ್ರ ವಂದಿಸಿದರು.