22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಲಿದ್ದಾರೆ. ಗಣ್ಯಾ ಅತಿಥಿಗಳಾಗಿ ದ.ಕ. ಜಿಲ್ಲಾ ಲೋಕಸಭಾ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ, ಲಯನ್ಸ್ ಜಿಲ್ಲೆ ರಾಜ್ಯಪಾಲ ಲ. ಡಾ. ಮೇಲ್ವಿನ್ ಡಿಸೋಜಾ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರುಗಳಾದ ಪ್ರತಾಪ್‌ಸಿಂಹ ನಾಯಕ್, ಹರೀಶ್ ಕುಮಾರ್, ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ಲಯನ್ಸ್ ಪ್ರಾಂತ್ಯ ಅಧ್ಯಕ್ಷ ಹೆರಾಲ್ಡ್ ತಾವ್ರೋ ಮೂಡಬಿದ್ರೆ, ವಿಶೇಷ ಅತಿಥಿಗಳಾಗಿ ಜೋಗಿ ಖ್ಯಾತಿಯ ಚಲನಚಿತ್ರ ನಟ ಪಟ್ರೆ ನಾಗರಾಜ್ ಬೆಂಗಳೂರು ಭಾಗವಹಿಸಲಿದ್ದಾರೆ.


ಸಂಜೆ ಭವ್ಯ ಮೆರವಣಿಗೆ, ಚಿಣ್ಣರ ಚಿಲಿಪಿಲಿ, ಹಾಡಿನ ಝೇಂಕಾರ, ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ. ತುಳು ಹಾಸ್ಯಮಯ ನಾಟಕ “ಪುದರ್ ದಿದಾಂಡ್” ಮುಂತಾದ ಕಾರ್ಯಕ್ರಮ ನಡೆಯಲಿದೆ.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya
error: Content is protected !!