ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ಜೂ. 22) ಕಾನೂನು ಅರಿವು ಕಾರ್ಯಕ್ರಮ ಜರಗಿತು.
ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ. ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು. ವಿದ್ಯಾರ್ಥಿಗಳು ಮೂಲಭೂತ ಕಾನೂನುಗಳ ಅರಿವು ಹೊಂದುವುದು ಅಗತ್ಯ ಎಂದರು.
ಮುಖ್ಯ ಅತಿಥಿ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅವರು ಮಾತನಾಡಿ, ವಿದ್ಯಾರ್ಥಿಗಳು ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ ಸೂಕ್ತ ಪ್ರಾಮುಖ್ಯ ನೀಡಬೇಕು ಎಂದರು.
ವಕೀಲ ಚಿದಾನಂದ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ಬಾಲ ಕಾರ್ಮಿಕ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಆರಾಧ್ಯ ಸ್ವಾಗತಿಸಿ, ಪ್ರಶ್ಯ ವಂದಿಸಿದರು. ಶಿಕ್ಷಕ ಮುರಳಿ ಕಾರ್ಯಕ್ರಮ ನಿರೂಪಿಸಿದರು.