ಮುಂಡಾಜೆ: ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಇಲ್ಲಿ ಜೂ.21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಾಪಕ ಆನಂದ ಜಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮನುಷ್ಯನಲ್ಲಿ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಯೋಗವು ಸಹಕಾರಿಯಾಗಿದೆ ಎಂದು ತಿಳಿಸಿ ಪ್ರತಿದಿನ ಯೋಗವನ್ನು ಮಾಡುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪ್ರತಿದಿನ ಯೋಗಾಸನಗಳನ್ನು ಮಾಡುತ್ತಾ ಆರೋಗ್ಯವಂತರಾಗಿ ಎಂದು ಶುಭ ಹಾರೈಸಿದರು.
ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು ಯೋಗ ಪ್ರಾತ್ಯಕ್ಷಿಕೆಯನ್ನು ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ್ ಎಂ ಎಸ್ ಇವರು ನಿರ್ವಹಿಸಿದರು. ಶಿಕ್ಷಕಿಯರಾದ ಶ್ರೀಮತಿ ಪಾರ್ವತಿ ಯು. ಶ್ರೀಮತಿ ಬಿ ಸಹನಾ. ಶ್ರೀಮತಿ ಪದ್ಮಲತಾ, ಶ್ರೀಮತಿ ವಿಜಯಲಕ್ಷ್ಮಿ , ಶ್ರೀಮತಿ ಗೀತಾ ಸಹಕರಿಸಿದರು.