25.3 C
ಪುತ್ತೂರು, ಬೆಳ್ತಂಗಡಿ
April 4, 2025
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಯೋಗ ಶಿಕ್ಷಕಿ ಶ್ರೀಮತಿ ಭವ್ಯ ಮಾತನಾಡಿ, ‘ಯೋಗದಲ್ಲಿ ಭಕ್ತಿಯೋಗ, ಕರ್ಮ ಯೋಗ, ಜ್ಞಾನಯೋಗ, ರಾಜಯೋಗ ಎನ್ನುವುದಿದೆ. ಯೋಗ ಗುರು ಪತಂಜಲಿಯವರು ಹೇಳಿರುವ ಅಷ್ಟಾಂಗ ಯೋಗಗಳನ್ನು ನಾವು ನಮ್ಮ ದಿನನಿತ್ಯದ ಜೀವನ ಕ್ರಮದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು .

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಸಂಚಾಲಕರಾದ ನಾರಾಯಣ ಫಡ್ಕೆ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ.ಆರ್, ಸಹ ಕಾರ್ಯಕ್ರಮಾಧಿಕಾರಿ ಸಂದೀಪ್ ಐ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸ್ವಯಂಸೇವಕಿ ಕುಮಾರಿ ಅಕ್ಷಯ ನಿರ್ವಹಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ.ಆರ್‌. ಸ್ವಾಗತಿಸಿ, ಸ್ವಯಂಸೇವಕ ಧನುಷ್ ಕೆ ಎನ್ ಧನ್ಯವಾದಗೈದರು.

Related posts

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿಗೆ ಶೇ.99.55 ಫಲಿತಾಂಶ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮೇ 8 : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya
error: Content is protected !!