ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಉಜಿರೆ: ಮಾನವ ಕುಲದ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯ. ದೇಶದ ಹಾಗೂ ಸಮುದಾಯದ ಅಭಿವೃದ್ದಿಯೊಂದಿಗೆ ವೈಯಕ್ತಿಕ ಉದ್ಧಾರವೂ ಮುಖ್ಯ. ಮಾನವೀಯ ಮೌಲ್ಯ ಅರಿಯುವುದರೊಂದಿಗೆ ನಾಯಕತ್ವ ಗುಣ , ಪ್ರತಿಭಾ ಅಭಿವ್ಯಕ್ತಿಗೆ , ಅಸಹಾಯಕರಿಗೆ ಸಹಾಯ ಇತ್ಯಾದಿ ಗುಣಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಪೋಷಕವಾಗಿದೆ. ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ. ಅಂತಹ ವ್ಯಕ್ತಿತ್ವ ವಿಕಸನಕ್ಕೆ ಈ ಯೋಜನೆ ಒಳ್ಳೆಯ ವೇದಿಕೆ. ಒಟ್ಟಾರೆ ರಾಷ್ಟ್ರೀಯ ಸೇವಾ ಯೋಜನೆಯಿಂದ ನಮ್ಮ ವ್ಯಕ್ತಿತ್ವದ ಉನ್ನತಿ ಸಾಧ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಎ. ಕುಮಾರ ಹೆಗ್ಡೆ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಿದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಸೇವೆಯೊಂದಿಗೆ ನಾಯಕನಾಗಿ ಬೆಳೆಯಲು ರಾ. ಸೇ.ಯೋಜನೆಯಿಂದ ಸಾಧ್ಯ ಎಂದು ನುಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ರಾ. ಸೇ. ಯೋಜನೆಯ ಸಲಹಾ ಸಮಿತಿಯ ಸದಸ್ಯ ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಕೆ ಹಾಜರಿದ್ದರು.

ಘಟಕದ ನಾಯಕಿ ಪ್ರಾಪ್ತಿ ಸ್ವಾಗತಿಸಿ , ನಾಯಕ ಆದಿತ್ಯ ವಂದಿಸಿದರು. ಸ್ವಯಂ ಸೇವಕಿ ಸಾಕ್ಷಿ ನಿರೂಪಿಸಿದರು.

Related posts

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!