September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ


ಕೊಯ್ಯೂರು : “ಮಾನಸಿಕ ಮತ್ತು ದೈಹಿಕ ಸ್ವಾಸ್ತ್ಯ ಕಾಪಾಡಲು ಯೋಗ ಅತ್ಯಂತ ಅವಶ್ಯಕತೆಯಾಗಿದೆ. ಯೋಗಾಭ್ಯಾಸವನ್ನು ನಮ್ಮ ಜೀವನದ ಅವಿಭಾಜ್ಯ ಅಂಗವನ್ನಾ ಗಿಸಬೇಕು ” ಎಂದು ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಚಮೆ ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ ನೆರವೇರಿಸಿ ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ದ ವಿದ್ಯಾರ್ಥಿನಿ ಕುಮಾರಿ ಅಭಿಜ್ಞಾ ವಿ. ಎಮ್. ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನಿರ್ವಹಿಸಿದರು.
ವಿದ್ಯಾರ್ಥಿನಿಯರಾದ ಭವ್ಯ, ಪ್ರಜ್ಞಾ, ಪ್ರಮಿತ, ನಿಶ್ಮಿತಾ, ಕವಿತಾ ಪ್ರಾರ್ಥನೆ ಗೈದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರೀತಿ ಎನ್. ಸ್ವಾಗತಿಸಿ,ಸಮಾಜ ಶಾಸ್ತ್ರ ಉಪನ್ಯಾಸಕ ಶ್ರೀ ಮಾಯಿಲ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಣೆ ಗೈದರು.

Related posts

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ: ರೂ. 24 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!