25.4 C
ಪುತ್ತೂರು, ಬೆಳ್ತಂಗಡಿ
May 18, 2025
ವರದಿ

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು (ಜೂ. 22) ಕಾನೂನು ಅರಿವು ಕಾರ್ಯಕ್ರಮ ಜರಗಿತು.

ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ. ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು. ವಿದ್ಯಾರ್ಥಿಗಳು ಮೂಲಭೂತ ಕಾನೂನುಗಳ ಅರಿವು ಹೊಂದುವುದು ಅಗತ್ಯ ಎಂದರು.

ಮುಖ್ಯ ಅತಿಥಿ, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅವರು ಮಾತನಾಡಿ, ವಿದ್ಯಾರ್ಥಿಗಳು ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ ಸೂಕ್ತ ಪ್ರಾಮುಖ್ಯ ನೀಡಬೇಕು ಎಂದರು.

ವಕೀಲ ಚಿದಾನಂದ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು. ಬಾಲ ಕಾರ್ಮಿಕ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು‌.

ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಅಧ್ಯಕ್ಷತೆ ವಹಿಸಿದ್ದರು‌. ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಆರಾಧ್ಯ ಸ್ವಾಗತಿಸಿ, ಪ್ರಶ್ಯ ವಂದಿಸಿದರು. ಶಿಕ್ಷಕ ಮುರಳಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya
error: Content is protected !!