30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

ನಿಟ್ಟಡೆ : ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಾಲಾ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಮಾರ್ಗದರ್ಶನವನ್ನು ನೀಡಿ ಉತ್ತಮ ರೀತಿಯಲ್ಲಿ ಪ್ರಾಣಾಯಾಮ ಮತ್ತು ವಿವಿಧ ರೀತಿಯ ಆಸನಗಳನ್ನು ಮಾಡಿಸಿದರು .

ಶಾಲಾ ಸಂಚಾಲಕ ಗಿರೀಶ್ ಕೆಎಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ಯೋಗಾಸನದಲ್ಲಿ ಪಾಲ್ಗೊಂಡಿದ್ದರು.

ಮುಖ್ಯ ಅತಿಥಿಯಾಗಿ ಗೋವರ್ಧನ್ ಹೆಚ್. ಸಿಎಸ್‌ಸಿ ಗೌವರ್ನೆನ್ಸ್ ಇಂಡಿಯನ್ ಸರ್ವಿಸಸ್ ಲಿಮಿಟೆಡ್ ಉಪಸ್ಥಿತರಿದ್ದು, ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಓಮನ ಹಾಗೂ ಪವನ್ ಸೀನಿಯರ್ ಎಕ್ಸಿಕ್ಯೂಟಿವ್ ಎಸ್ ಬಿ ಐ ಜನರಲ್ ಇನ್ಸೂರೆನ್ಸ್ ಮಂಗಳೂರು ಮತ್ತು ಹರಿಣಾಕ್ಷಿ ಸಿ ಎ ಸ್ಸಿ ಸೆಂಟರ್ ನಾರಾವಿ ಉಪಸ್ಥಿತರಿದ್ದರು.

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ವಾಣಿ ಯೋಗಾಸನದಿಂದ ಆಗುವ ಉಪಯೋಗವನ್ನು ತಿಳಿಸಿದರು. ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಸುಜಾತ ನಿರೂಪಿಸಿ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಅಕ್ಷತ ಸ್ವಾಗತಿಸಿ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪವಿತ್ರ ಧನ್ಯವಾದವಿತ್ತರು. ಎಲ್ಲಾ ಶಿಕ್ಷಕ, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!