September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯದ್ ಹಬೀಬ್ ಮಾತನಾಡಿ ” ಜೀವನದಲ್ಲಿ ಅಲ್ಪಸಮಯವನ್ನಾದರೂ ಯೋಗಕ್ಕೆ ಮೀಸಲಿಟ್ಟು ನಮ್ಮ ಜೀವನವನ್ನು ಸಾರ್ಥಕಗೊಳಿಸಬೇಕು ” ಎಂದು ಹೇಳಿ ಎಲ್ಲರಿಗೂ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ತನ್ನ ಪ್ರಾಸ್ತಾವಿಕ ಮಾತುಗಳೊಂದಿಗೆ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ನಡೆದ ವಿವಿಧ ಯೋಗಾಸನಗಳ ಪ್ರದರ್ಶನ ಮೆಚ್ಚುಗೆಗೆ ಕಾರಣವಾಯಿತು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಸಯ್ಯದ್ ಅಯ್ಯುಬ್, ಸಯ್ಯದ್ ಇರ್ಫಾನ್ ಉಪಸ್ಥಿತರಿದ್ದರು.

ಶಾಲಾ ಹತ್ತನೇ ತರಗತಿ ವಿದ್ಯಾರ್ಥಿನಿಯರಾದ ಆಯಿಷತ್ ರಫಾ ಅತಿಥಿಗಳನ್ನು ಸ್ವಾಗತಿಸಿದರು. ಫಾತಿಮತ್ ರಾಫಿಯ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ಹುಸ್ನ ಬೇಗಮ್ ಇವರ ಧನ್ಯವಾದವಿತ್ತರು.

Related posts

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಕರಾಟೆ ಪಂದ್ಯಾಟ: ಕೊಯ್ಯೂರು ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya
error: Content is protected !!