April 2, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ
ದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ, ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನವನ್ನು ಜೂನ್ 23 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯರ ಪ್ರಕೋಷ್ಠ ರಾಜ್ಯ ಸಂಚಾಲಕರು ವಿಧಾನ ಪರಿಷತ್ ಶಾಸಕರು ಆಗಿರುವ ಶ್ರೀ ಪ್ರತಾಪ್ ಸಿಂಹ ನಾಯಕ್ ಅವರು ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಮೌಲ್ಯಗಳನ್ನು ತಿಳಿಸಿದರು. ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅವರು ಪಕ್ಷ ಕ್ಕೆ ಕೊಟ್ಟ ಕೊಡುಗೆಯನ್ನು ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಮತ್ತು ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ದನ್ಯವಾದವಿತ್ತರು. ಈ ಸಂದರ್ಭದಲ್ಲಿ ಮoಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು, ಆಶಾ ಸಲ್ದಾನ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಉಮೇಶ್ ಕುಲಾಲ್ ಉಪಸ್ಥಿತರಿದ್ದರು.


ನಗರದ 105 ಬೂತ್ ಅಧ್ಯಕ್ಷರಾದ ಅಕ್ಷಯ್ ರಾವ್ ರವರ ಮನೆಯಲ್ಲಿ ಸಸಿ ನೆಡಲಾಯಿತು.

Related posts

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya
error: Content is protected !!