24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟವೂ ಬೆಳ್ತಂಗಡಿ ತಾಲೂಕು ಮೈದಾನ ಮತ್ತು ಬಂಗೇರಕಟ್ಟೆ ಕಲ್ಲಗುಡ್ಡೆ ಮೈದಾನದಲ್ಲಿ ನಡೆಯಿತು.

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಮುಖ್ಯ ಅತಿಥಿಯಾಗಿ ಆಗಮಿಸಿ ಸಂಸ್ಥಾಪನಾ ದಿನಾಚರಣೆಯ ಶುಭಾಶಯ ಕೋರಿದರು. ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮದ ಅಗತ್ಯತೆಯನ್ನು ಮನವರಿಕೆ ಮಾಡಿದರು. ಗ್ರಾಮೀಣ ಭಾಗದ ಎಲ್ಲಾ ಯುವಕರು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವಂತೆ ಕರೆ ನೀಡಿದರು. ವಿಜೇತರಿಗೆ ಬಹುಮಾನ ವಿತರಿಸಿದರು‌.

ಕ್ರೀಡಾಕೂಟದಲ್ಲಿ ಕ್ರಿಕೆಟ್, ಥ್ರೋ ಬಾಲ್, ಲಿಂಬೆ ಚಮಚ ಓಟ, ವಿಕೆಟ್ ಸುತ್ತು ಓಟ ಹಾಗೂ ಇನ್ನಿತರ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ವಝೀರ್ ಬಂಗೇರಕಟ್ಟೆ ಮತ್ತು ರಿಯಾಝ್ ಬೆಳ್ತಂಗಡಿ ಕ್ರೀಡಾಕೂಟವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನಗರ ಸಮಿತಿ ಅಧ್ಯಕ್ಷರಾದ ಇಸ್ಮಾಲಿ ಐ ಬಿ, ಹನೀಫ್ ವರ್ಷಾ, ಹನೀಫ್ ಟಿ ಎಸ್, ಖಾಸಿಂ ಬಳ್ಳಮಂಜ, ರಝಕ್ ಬಿ ಎಂ, ಆಸೀಫ್ ಬಂಗೇರಕಟ್ಟೆ, ಹನೀಫ್, ಉಮರಬ್ಬ, ಇಕ್ಬಾಲ್, ಇಮ್ರಾನ್, ರಶೀದ್ ಬೆಳ್ತಂಗಡಿ, ಅಬೂಸಾಲಿ ಬೆಳ್ತಂಗಡಿ, ಬೆಳ್ತಂಗಡಿ ನಗರ ಸಮಿತಿ, ಮಚ್ಚಿನ ಪಾರೆಂಕಿ ಗ್ರಾಮ ಸಮಿತಿಯ ಪಧಾದಿಕಾರಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!