ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ವಿನಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೊಳ್ಮನಾರ್ ಚರ್ಚಿನ ಧರ್ಮ ಗುರುಗಳಾದ ಸೆಬಾಸ್ಟಿಯನ್ ಪುನ್ನತಾನತ್ತ ರವರು ಮಾತನಾಡಿ ಶಾಲೆಯಲ್ಲಿ ಒಂದು ಸರ್ಕಾರ ರಚನೆ ಮಾಡಿ ಮಕ್ಕಳಿಗೆ ಜವಾಬ್ದಾರಿ ಹಂಚುವುದು ಬಹಳಷ್ಟು ಸಂತೋಷವಾಗಿದೆ, ಈ ಸಂದರ್ಭದಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ವಿದ್ಯಾರ್ಥಿಗಳಲ್ಲಿ ಹಂಚಿಕೊಂಡರು,ಶಾಲೆಯಿಂದ ಎಲ್ಲಾ ಶಿಕ್ಷಣ ದೊರೆಯಬೇಕು ಶಾಲಾ ಚುನಾವಣೆಯು ವಿದ್ಯಾರ್ಥಿಗಳ ನಾಯಕತ್ವ ಗುಣ ಬೆಳೆಸಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯ ಶಿಕ್ಷಕ ಶೀನಪ್ಪಗೌಡ ಈ ವರ್ಷ ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆ ಮೂಡಿಸಿ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಲವು ಜವಾಬ್ದಾರಿಗಳನ್ನು ಹಂಚಲಾಗಿದೆ ಇದರಿಂದ ಮಕ್ಕಳಿಗೆ ಶಾಲಾ ದಿನಗಳಲ್ಲಿ ಉತ್ತಮ ಜವಾಬ್ದಾರಿ ಬರುತ್ತದೆ ಎಂದು ತಿಳಿಸಿದರು.
ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಶಾಲಾ ಮಂತ್ರಿಮಂಡಲ ಜವಾಬ್ದಾರಿಗಳನ್ನು ತಿಳಿಸಿದರು. ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿ ಸ್ವಾಗತಿಸಿ, ಶಾಲಾ ಶಿಕ್ಷಕ ಪವನ್ ಕುಮಾರ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.