26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಹಕಾರ ಭಾರತಿ ಸಮಿತಿ ಸಭೆ

ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿಯ ಸಭೆ ಜೂ.24ರಂದು ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.

ಸಹಕಾರ ಭಾರತಿ‌ ಜಿಲ್ಕಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ದಿನಗಳಲ್ಲಿ ಸಹಕಾರ ಭಾರತಿ ಇದರ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 18 ಸಂಘಗಳಲ್ಲಿ ಸಹಕಾರ ಭಾರತಿ ಅಡಳಿತ ನಡೆಸುತ್ತಿದ್ದು, ಉತ್ತಮ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೆಎಂಎಫ್ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕುಶಾಲಪ್ಪ ಗೌಡ ಪೂವಾಜೆ ಮತ್ತು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗನ್ನಾಥ ಶೆಟ್ಟಿ ಮೈರ ಅವರನ್ನು ಅಭಿನಂದಿಸಲಾಯಿತು.


ಸಹಕಾರ ಭಾರತಿ‌ ಬೆಳ್ತಂಗಡಿ ಅಧ್ಯಕ್ಷ ವೆಂಕಪ್ಪಯ್ಯ ಸ್ವಾಗತಿಸಿದರು. ನಿಕಟಪೂರ್ವಾಧ್ಯಕ್ಷ ರಾಜೇಶ್ ಪೆಂರ್ಬುಡ ವಂದಿಸಿದರು.

Related posts

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya
error: Content is protected !!