September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

ಮಡಂತ್ಯಾರು : ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡವು 4 ವರ್ಷಗಳನ್ನು ಪೂರೈಸಿ 5 ನೇ ವರ್ಷ ಕ್ಕೆ ಪಾದಾರ್ಪಣೆ ಗೈಯುವ ಸವಿನೆನಪಿಗಾಗಿ ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ರಾವ್ ಪೇಜಾವರ ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೂಪಾ ರವರು ಗಿಡ ನಾಟಿ ಮಾಡುವ ಮೂಲಕ ಶುಭಹಾರೈಸಿದರು.

ಮಡಂತ್ಯಾರು ವಲಯ ಮೇಲ್ವಿಚಾರಕ ವಸಂತ ಕುಮಾರ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಅರ್ಚಕರಾದ ಆದಿತ್ಯ, ಪಾರೆಂಕಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಕುಮಾರ್, ಸೇವಾ ಪ್ರತಿನಿಧಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶೌರ್ಯ ಸ್ವಯಂ ಸೇವಕ ಬಾಲಕೃಷ್ಣ ಹಾರಬೆ, ದಯಾನಂದ ಹಚ್ಚಬೆ, ದೀಪಕ್ ಹಾರಬೆ, ಸುಜೀತ್ ಕುಮಾರ್, ಜಯ ಪೂಜಾರಿ ಕುತ್ತಿನ, ಪುರುಷೋತ್ತಮ, ಮಾಧವ, ಶ್ರೀಮತಿ ಶೋಭಾ, ಶ್ರೀಮತಿ ಶಕುಂತಳಾ, ಬೇಬಿ, ಸತೀಶ್ ಆಚಾರ್ಯ ಗಿಡ ನಾಟಿ ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya
error: Content is protected !!