September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ನಾಯಕ ಮತ್ತು ಉಪನಾಯಕ ಸ್ಥಾನಕ್ಕೆ ಮತದಾನವು ಜೂನ್ 22 ರಂದು ನಡೆಯಿತು.

ಈ ಶೈಕ್ಷಣಿಕ ವರ್ಷದ ಮತದಾನವು ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (EVM) ಮೂಲಕ ನೆರವೇರಿತು. ಮಂಗಳೂರಿನ ಕೆನರ ಕಮ್ಯುನಿಕೇಶನ್ ಸೆಂಟರ್ ನ ನಿರ್ದೇಶಕರಾದ ವಂ|ಸ್ವಾ|ಅನಿಲ್ ಫೆರ್ನಾಂಡಿಸ್ ರವರು ವಿದ್ಯಾರ್ಥಿಗಳಿಗೆ EVM ನಲ್ಲಿ ಓಟು ಹಾಕುವ ಬಗ್ಗೆ ಮಾರ್ಗದರ್ಶನ ನೀಡಿ, ಚುನಾವಣೆಗೆ ಸಿದ್ಧತೆಗಳನ್ನು ಮಾಡಿದರು.


ಶಾಲಾ ನಾಯಕನ ಸ್ಥಾನಕ್ಕೆ 10ನೇ ತರಗತಿಯ ಒಟ್ಟು 5 ವಿದ್ಯಾರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದರು. ಉಪನಾಯಕ ಸ್ಥಾನಕ್ಕೆ 9ನೇ ತರಗತಿಯ ಒಟ್ಟು 3 ವಿದ್ಯಾರ್ಥಿಗಳು ನಾಮಪತ್ರವನ್ನು ಸಲ್ಲಿಸಿದರು. ಲಿಸ್ಟನ್ ಕಾರ್ಲ್ ಶಾಲಾ ನಾಯಕನಾಗಿ ಹಾಗೂ ರಿಶೋನ್ ಲೋಬೊ ಉಪನಾಯಕನಾಗಿ ಬಹುಮತದಿಂದ ಆಯ್ಕೆಯಾದರು.

ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು ಈ ಶೈಕ್ಷಣಿಕ ವರ್ಷದ ಮತದಾನವು ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮೂಲಕ ನಡೆಸಲು ಉತ್ತೇಜಿಸಿ ಮಾರ್ಗದರ್ಶನ ನೀಡಿದರು. ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!