September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಪೆರ್ಮಾಣು: ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ 2023-24 ನೇ ಸಾಲಿನ ಪ್ರಥಮ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಆವರಣದಲ್ಲಿ ಜೂ.24 ರಂದು ಜರುಗಿತು.

ಸಭೆಯು ಸಂಘದ ಅಧ್ಯಕ್ಷ ಪ್ರವೀಣ್ ವಿ.ಜಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೆ.ಎಮ್.ಎಫ್ ವೈದ್ಯಾಧಿಕಾರಿ ಡಾ| ಗಣಪತಿ ಮಾಹಿತಿ ನೀಡಿದರು.

ಈ ವೇಳೆ ಸಂಘವು ರೂ. 2,64,000 ಲಾಭ ಹೊಂದಿದ್ದು, ಸಂಘದ ಸದಸ್ಯರ ಮಕ್ಕಳು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಧನಸಹಾಯ ನೀಡಲಾಯಿತು. ಸಂಘದ ಇಬ್ಬರು ಸದಸ್ಯರಿಗೆ ಆರೋಗ್ಯ ಸಹಾಯ ಧನ ಹಸ್ತಾಂತರಿಸಲಾಯಿತು.

ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕುವ ಸದಸ್ಯರಾದ ಪ್ರಥಮ ಆಶ್ರಯ ಅಜ್ರಿ ಮೂಡಬೆಟ್ಟು, ದ್ವಿತೀಯ ಪ್ರವೀಣ್ ವಿ.ಜಿ. , ತೃತೀಯ ಸುಂದರ ಗೌಡ ರವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮೇಲ್ವಿಚಾರಕಿ ಯಮುನಾ, ಸಂಘದ ನಿರ್ದೇಶಕರು , ಸದಸ್ಯರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಶ್ರೀಮತಿ ಶಾಂತಿ ವರದಿ ವಾಚಿಸಿದರು. ಉಪಾಧ್ಯಕ್ಷೆ ಸುಮಿತ್ರಾ ಶೆಟ್ಟಿ ಸ್ವಾಗತಿಸಿ, ನಿರ್ದೇಶಕಿ ಸುಲತಾ ಧನ್ಯವಾದವಿತ್ತರು.

Related posts

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya
error: Content is protected !!