25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಎರಡು ತರಬೇತಿ ತಂಡಗಳ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡುತ್ತಾ ರುಡ್‌ಸೆಟ್ ಸಂಸ್ಥೆಗಳ ತರಬೇತಿಯಲ್ಲಿ ಪ್ರಯೋಗಿಕ ತರಬೇತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದರಿಂದ ಶಿಬಿರಾರ್ಥಿಗಳಿಗೆ ಹೆಚ್ಚು ಕೌಶಲ್ಯ ಪಡೆಯಲು ಸಾದ್ಯವಾಗುತ್ತದೆ ಎಂದು ತಿಳಿಸಿದರು. ಇದರಿಂದ ಸ್ವಂತ ಉದ್ಯೋಗ ಪ್ರಾರಂಭಿಸಲು ಅನುಕೂಲವಾಗುತ್ತದೆ, ಇಲ್ಲಿನ ತರಬೇತಿ ಪಡೆದ ನಂತರವೂ ಹೊಸ ಹೊಸ ತಂತ್ರಜ್ಞಾನಗಳನ್ನು ನವೀಕರಿಸಿಕೊಳ್ಳಿ, ಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿ ಹಾಗೂ ಉದ್ಯಮಿಗಳು ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಂಡಾಗ ಲಾಭ ನಷ್ಟಗಳ ವಿವರ ದೊರೆಯುತ್ತದೆ ಎಂದು ಹೇಳಿದರು. ತರಬೇತಿ ಪಡೆದ ಎಲ್ಲರಿಗೂ ಶುಭ ಹಾರೈಸಿ ಆರ್ಶೀವದಿಸಿದರು.

ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ಕಛೇರಿಯ ಸಹಾಯಕ ಮಾಹಾ ಪ್ರಬಂಧಕ ರಂಜನ್ ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ. ಎನ್. ಜರ್ನಾಧನ್, ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ ಬಿ.ಪಿ ಉಪಸ್ಥಿತರಿದ್ದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ ರವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಅವರು ವಂದಿಸಿದರು. ತರಬೇತಿಯಲ್ಲಿ ಒಟ್ಟು 65 ಜನ ಅಭ್ಯರ್ಥಿಗಳನ್ನು ಭಾಗವಹಿಸಿದ್ದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya
error: Content is protected !!