September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಇಲ್ಲಿಯ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಮೋಟಾರ್‌ ಸೈಕಲ್‌ (ಬೈಕ್) ಕಳವಾದ ಘಟನೆ ಜೂ.22 ರಂದು ನಡೆದಿದೆ.

ಧರ್ಮಸ್ಥಳ ರಾಜೇಶ್ ಕುಲಾಲ್,(31 ವರ್ಷ) ರವರ ದೂರಿನಂತೆ, ಜೂ.22 ರಂದು ಬೆಳಿಗ್ಗೆ, ಧರ್ಮಸ್ಥಳ ಗ್ರಾಮದ ಶ್ರೀ ಗಣೇಶ್‌ ಸ್ಟೋರ್‌ ಅಂಗಡಿ ಎದುರು ರಸ್ತೆಯ ಬದಿಯಲ್ಲಿ, ತನ್ನ ಬಾಬ್ತು ಮೋಟಾರ್‌ ಸೈಕಲ್‌ ನಂಬ್ರ KA70J4070 ಮೋಟಾರ್‌ ಸೈಕಲ್‌ ನಿಲ್ಲಿಸಿ ಹೋದವರು, ವಾಪಾಸು ಒಂದು ಗಂಟೆಯ ಬಳಿಕ ಹಿಂತಿರುಗಿ ಬಂದು ನೋಡಿದಾಗ, ರಾಜೇಶ್ ರವರ ಬಾಬ್ತು ಮೋಟಾರ್‌ ಸೈಕಲ್‌, ಅವರು ನಿಲ್ಲಿಸಿದ್ದ ಜಾಗದಲ್ಲಿ ಇಲ್ಲದೇ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿದೆ. ಮೋಟಾರ್‌ ಸೈಕಲ್‌ ನ್ನು ಸುತ್ತಮುತ್ತ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಕಳವಾದ ಮೋಟಾರ್‌ ಸೈಕಲ್‌ ನ ಅಂದಾಜು ಮೌಲ್ಯ ರೂ 30000/- ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ, ಅಪರಾಧ ಕ್ರಮಾಂಕ: 49/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya
error: Content is protected !!