September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

ಕುವೆಟ್ಟು : ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಬಸ್ಸು ಇಲ್ಲದೆ ಬೆಳಗ್ಗಿನ ಹೊತ್ತಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜೂ. 24ರಂದು ಬೆಳಿಗ್ಗೆ ಸರಿಯಾಗಿ ಬಸ್ಸು ಇಲ್ಲದೆ ಮದ್ದಡ್ಕದಲ್ಲಿ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ದೃಶ್ಯ ಕಂಡುಬಂದಿದೆ.

ಶಾಲಾ ಮಕ್ಕಳಿಗೆ ಸರಿಯಾದ ಸಮಯಕ್ಕೆ ತರಗತಿಗೆ ತಲುಪಲೇಬೇಕಾದ ಅನಿವಾರ್ಯತೆ ಇದೆ. ವಿದ್ಯಾರ್ಥಿಗಳು, ಜನರು ಕಂಡ ಕಂಡ ವಾಹನವನ್ನು ಹತ್ತಿ ನೇತಾಡಿಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಬಸ್ಸುಗಳು ಬರುತ್ತಿಲ್ಲ ಮದ್ದಡ್ಕ ಗ್ರಾಮೀಣ ಪ್ರದೇಶವಾದ್ದರಿಂದ ಕೆಲವೇ ಕೆಲವು ಬಸ್ಸುಗಳು ನಿಲುಗಡೆ ಇದೆ. ಈ ಮಳೆಗಾಲದ ಸಂದರ್ಭದಲ್ಲಿ ಬಾರಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಇತ್ತ ಕಡೆ ಗಮನ ಹರಿಸಬೇಕಾಗಿ ಗ್ರಾಮೀಣ ಪ್ರದೇಶದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ “ಸಿರಿ ಕ್ಲಬ್” ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
error: Content is protected !!