31.1 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಪ್ರಸ್ತುತ ವರ್ಷಕ್ಕೆ ಕಲ್ಪಿಸಲು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈಗಾಗಲೇ ಕ್ರಮ ವಹಿಸಬೇಕಾಗಿತ್ತು. ಈಗಾಗಲೇ ಜೂನ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದು, ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ಪ್ರಾರಂಭವಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಟೆಂಡ‌ರ್ ಪ್ರಕ್ರಿಯೆ ವಿಳಂಭವಾದ್ದರಿಂದ ಬೆಳೆ ವಿಮೆ ಅವಧಿಯನ್ನು 2023 ರ ಆಗಸ್ಟ್ 1 ರಿಂದ 2024 ರ ಜುಲೈ 31 ರ ವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಒಮ್ಮೆ ಬೆಳೆ ವಿಮೆ ಪಡೆದರೆ ಅದು 3 ವರ್ಷದ ಅವಧಿಗೆ ಚಾಲ್ತಿಯಲ್ಲಿರುತ್ತಿತ್ತು ಆದರೆ ಕಳೆದ ವರ್ಷದಿಂದ ಕೇವಲ 1 ವರ್ಷದ ಅವಧಿಗೆ ಮಾತ್ರ ಮಿತಿಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಈ ಹಿಂದೆ ಇದ್ದಂತೆ ಬೆಳೆ ವಿಮೆ ಅವಧಿಯನ್ನು 3 ವರ್ಷಗಳಿಗೆ ವಿಸ್ತರಿಸಬೇಕು ಹಾಗೂ ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಅವರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈ ಕೂಡಲೇ ಕ್ರಮ ವಹಿಸಬೇಕು ಎಂದರು.

Related posts

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!