April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ, ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇದರ ಸಹಯೋಗದಲ್ಲಿ ಜೂ. 27 ರಂದು ಪೂರ್ವಾಹ್ನ ಗಂಟೆ 9-00ಕ್ಕೆ ಸರಿಯಾಗಿ ಉಜಿರೆಯ ಶ್ರೀ ಶಾರದ ಮಂಟಪದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಸನ್ನ ಶಿಕ್ಷಣ ಸಮೂಹ ವಿದ್ಯಾಸಂಸ್ಥೆಗಳು ಲಾಯಿಲ ಬೆಳ್ತಂಗಡಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಅಪರಾಹ್ನ ಗಂಟೆ 1-00ರ ವರೆಗೆ ಬೃಹತ್‌ ರಕ್ತದಾನ ಶಿಬಿರ ನಡೆಯಲಿರುವುದು.

ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತೇಸರರು ಶರತ್‌ ಕೃಷ್ಣ ಪಡ್ಡೆಟ್ನಾಯ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಾಜಿ ಸಚಿವರು ಕೆ. ಗಂಗಾಧರ ಗೌಡ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಕಿವಿ, ಮೂಗು, ಗಂಟಲು ಶಸ್ತ್ರ ಚಿಕಿತ್ಸಾ ತಜ್ಞರು ಡಾ| ವಿಶ್ವ ವಿಜೇತ ಎಸ್.ಕೆ., ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್, ಉಜಿರೆ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಅಧ್ಯಕ್ಷ ರಂಜನ್ ಜಿ. ಗೌಡ, ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಗೌಡ ಇಚ್ಚಿಲ, ಒಕ್ಕಲಿಗರ ಸೇವಾ ಸಂಘ ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ಒಕ್ಕಲಿಗರ ಸೇವಾ ಸಂಘ ಸದಸ್ಯೆ ಶ್ರೀಮತಿ ಸೌಮ್ಯಲತಾ ಜಯಂತ ಗೌಡ ಗುರಿಪಳ್ಳ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ಸಂಘ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ತಾಲೂಕು ಒಕ್ಕಲಿಗ ಗೌಡರ ಮಹಿಳಾ ಸಂಘ ಅಧ್ಯಕ್ಷೆ ಶ್ರೀಮತಿ ಅಪರ್ಣಾ ಶಿವಕಾಂತ ಗೌಡ, ತಾಲೂಕು ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ ಅಧ್ಯಕ್ಷೆ ಶ್ರೀಮತಿ ಅನುಪಮಾ ಸತೀಶ್ ಗೌಡ, ಮಂಗಳೂರು ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮೆಡಿಕಲ್ ಆಫಿಸರ್ ಡಾ| ಸುನಿಧಿ ಭಾಗವಹಿಸಲಿದ್ದಾರೆ.

Related posts

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya
error: Content is protected !!