24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಬಗ್ಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೇ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಪ್ರಸ್ತುತ ವರ್ಷಕ್ಕೆ ಕಲ್ಪಿಸಲು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈಗಾಗಲೇ ಕ್ರಮ ವಹಿಸಬೇಕಾಗಿತ್ತು. ಈಗಾಗಲೇ ಜೂನ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದು, ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ಪ್ರಾರಂಭವಾಗಿರುವುದಿಲ್ಲ. ಅಲ್ಲದೇ ಕಳೆದ ವರ್ಷ ಟೆಂಡ‌ರ್ ಪ್ರಕ್ರಿಯೆ ವಿಳಂಭವಾದ್ದರಿಂದ ಬೆಳೆ ವಿಮೆ ಅವಧಿಯನ್ನು 2023 ರ ಆಗಸ್ಟ್ 1 ರಿಂದ 2024 ರ ಜುಲೈ 31 ರ ವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಒಮ್ಮೆ ಬೆಳೆ ವಿಮೆ ಪಡೆದರೆ ಅದು 3 ವರ್ಷದ ಅವಧಿಗೆ ಚಾಲ್ತಿಯಲ್ಲಿರುತ್ತಿತ್ತು ಆದರೆ ಕಳೆದ ವರ್ಷದಿಂದ ಕೇವಲ 1 ವರ್ಷದ ಅವಧಿಗೆ ಮಾತ್ರ ಮಿತಿಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಈ ಹಿಂದೆ ಇದ್ದಂತೆ ಬೆಳೆ ವಿಮೆ ಅವಧಿಯನ್ನು 3 ವರ್ಷಗಳಿಗೆ ವಿಸ್ತರಿಸಬೇಕು ಹಾಗೂ ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಅವರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈ ಕೂಡಲೇ ಕ್ರಮ ವಹಿಸಬೇಕು ಎಂದರು.

Related posts

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya
error: Content is protected !!