July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರಗಿದ ಪೋಷಕರ ಸಮಾವೇಶದಲ್ಲಿ ಮೂರು ತರಗತಿಗಳು ಮತ್ತು ಕ್ರೀಡಾ ಭಿತ್ತಿಪತ್ರಿಕೆಗಳ ಅನಾವರಣ ಕಾರ್ಯಕ್ರಮ ಜರಗಿತು. ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಉಜಿರೆ ಶ್ರೀಧ ಮಂ ಎಜ್ಯುಕೇಶನಲ್ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ರವರು ಮಾತನಾಡುತ್ತಾ, ಹದಿಹರೆಯದ ಅವಧಿಯಲ್ಲಿ ಮಕ್ಕಳ ಬಗ್ಗೆ ವಿಶೇಷ ಗಮನ ಮತ್ತು ಕಾಳಜಿಯ ಅಗತ್ಯವಿರುತ್ತದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರು ಪೂರಕವಾಗಿ ಕಾರ್ಯ ನಿರ್ವಹಣೆ ಮಾಡಬೇಕಾದ ಅಗತ್ಯವಿರುತ್ತದೆ. ಅದಕ್ಕೆ ಪೋಷಕರ ಸಂಘವು ಉತ್ತಮ ವೇದಿಕೆಯಾಗಿದೆಯೆಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಅತಿಥಿಗಳು ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಪ್ರಸ್ತಾವನೆಯೊಂದಿಗೆ ವಾರ್ಷಿಕ ಚಟುವಟಿಕೆಗಳ ವಿವರವನ್ನು ನೀಡಿದರು. ಶಿಕ್ಷಕರಾದ ಸುಮನ್ ರವರು ವರದಿ ವಾಚಿಸಿದರು. ರವಿಚಂದ್ರರವರು ಶೈಕ್ಷಣಿಕ ವರ್ಷದ ನೂತನ ಶಿಕ್ಷಕ ರಕ್ಷಕ ಸಂಘದ ರಚನೆಯ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಭವಾನಿ ಮಾರ್ಪಾಲು ಮತ್ತು ನಿಕಟಪೂರ್ವ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರುರವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ರಾಜೇಶ್ ಕುರ್ಕಿಲು, ಶಿಕ್ಷಕರಾದ ಗಣೇಶ್ವರ್, ಕೃಷ್ಣಾನಂದ ಮತ್ತು ಚಿತ್ರಾರವರು ಉಪಸ್ಥಿತರಿದ್ದರು. ಶಿಕ್ಷಕರಾದ ಜಗದೀಶ್ ರವರು ಸ್ವಾಗತಿಸಿ, ರಾಜಶ್ರಿಯವರು ವಂದಿಸಿದರು, ಶ್ರೀಮತಿ ಕೋಕಿಲಾರು ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya
error: Content is protected !!