24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

ಇಂದಬೆಟ್ಟು: ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿಗೆ ಸೆಲ್ಕೋ ಇಂಡಿಯಾ ಫೌಂಡೇಶನ್ ಇದರ ವತಿಯಿಂದ 5KW ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಹಸ್ತಾಂತರ ಕಾರ್ಯಕ್ರಮ ಜೂ.24 ರಂದು ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ವಹಿಸಿದ್ದರು.

ಈ ಸಂದರ್ಭದಲ್ಲಿ ಸೆಲ್ಕೋ ಇಂಡಿಯಾ ಡಿಜಿಎಂ ಗುರುಪ್ರಕಾಶ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ( ಪ್ರಭಾರ) ಡಾ| ಸಂಜಾತ್‌ , ಮಲವಂತಿಗೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್‌ ಜೈನ್ , ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡೀಲು , ಬಂಗಾಡಿ ಸಿಎ ಬ್ಯಾಂಕ್‌ ಅಧ್ಯಕ್ಷ ಹರೀಶ್‌ ಸಾಲಿಯಾನ್‌ , ಇಂದಬೆಟ್ಟು, ನಾವೂರು, ಮಲವಂತಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಂಚಾಯತ್ ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಇಂದಬೆಟ್ಟು ಗ್ರಾಮದ ಸಾರ್ವಜನಿಕರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸೆಲ್ಕೋ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ 549 ಸೇವಾ ಯೋಜನೆ :15 ಜನ ಅಂದಕಲಾವಿದರಿಗೆರೂ.15 ಸಾವಿರ ರೂ. ನೆರವು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
error: Content is protected !!